Daily Horoscope

Select Your Language

Notifications

webdunia
webdunia
webdunia
webdunia

ಧರ್ಮಸ್ಥಳ ಸೌಜನ್ಯ ಸಾವು ಪ್ರಕರಣದಲ್ಲಿ ಊಹಿಸಲಾಗದ ಬೆಳವಣಿಗೆ

Dharmasthala Murder Case
Photo Credit X
ಬೆಳ್ತಂಗಡಿ: ದೇಶದಲ್ಲೇ ಭಾರೀ ಸದ್ದು ಮಾಡಿದ್ದ ಧರ್ಮಸ್ಥಳದ ಸೌಜನ್ಯಾ ಸಾವು ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ವಿಶೇಷ ತನಿಖಾ ತಂಡ ರಚಿಸಿ ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿರುವುದಾಗಿ ತಿಳಿದು ಬಂದಿದೆ.

ಇದೀಗ 14ವರ್ಷಗಳ ಬಳಿಕ ಮರು ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.

2012ರ ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದು, ಬಳಿಕ ಸಿಐಡಿ ಹಾಗೂ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ
ತನಿಖೆಯ ಬಳಿಕ ಸಂತೋಷ್ ರಾವ್ ಎಂಬಾತನನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು.

ಖುಲಾಸೆ ಬಳಿಕ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಮರುತನಿಖೆ ನಡೆಸಬೇಕೆಂಬ ಬೇಡಿಕೆ ಮುನ್ನೆಲೆಗೆ ಬಂದಿತ್ತು. ಸೌಜನ್ಯಾಳ ಕುಟುಂಬವೂ ಮರುತನಿಖೆಗೆ ಆಗ್ರಹಿಸಿತ್ತು. 2024ರಲ್ಲಿ ಕರ್ನಾಟಕ ಹೈಕೋರ್ಟ್ನಲ್ಲಿ ಮರುತನಿಖೆ ಕೋರಿ ಸಲ್ಲಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಎರಡು ಬಸ್‌ನ ಮಧ್ಯೆ ಸಿಲುಕಿ ಈ ಸೈಕಲ್ ಸವಾರ ಪಟ್ಟ ಪಾಡು ನೋಡಿ, Video