Publish Date: Tue, 16 Jan 2018 (20:27 IST)
Updated Date: Tue, 16 Jan 2018 (20:28 IST)
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಜಿ.ಪರಮೇಶ್ವರ್ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಪರಮೇಶ್ವರ್ ಅವರು ವಿರೋಧ ವ್ಯಕ್ತಪಡಿಸಿದ್ದರಿಂದ ಪರಿಶಿಷ್ಟ ಜಾತಿ ಸಮುದಾಯದ ಜನರು ಅಸಮಾಧಾನಗೊಂಡಿದ್ದು, ಮುಂಬರುವ ಚುನಾವಣೆಯಲ್ಲಿ ಪರಮೇಶ್ವರ್ ಅವರಿಗೆ ಮತ ಹಾಕದಿರಲು ನಿರ್ಧಾರ ಕೈಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಿಗೆ ಮಾದಿಗ ಜನಾಂಗದ ಬಗ್ಗೆ ಕಾಳಜಿ ಇಲ್ಲ. ಸದಾಶಿವ ವರದಿ ಜಾರಿಗೆ ಅವರು ತೊಡಕಾಗಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.