ಹಾಡಹಗಲೇ ಎಪಿಎಂಸಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ ನಡೆದ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್‌ನಲ್ಲಿ ನಡೆದಿದೆ.
ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಶ್ರೀನಿವಾಸ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುಷ್ಕರ್ಮಿಗಳ ಅಟ್ಟಹಾಸಕ್ಕೆ ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್ ಅವರ ಕಾರು ಚಾಲಕ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಈಶಾನ್ಯ ವಿಭಾಗದ ಡಿಸಿಪಿ ಹರ್ಷ ಹಾಗೂ ಯಲಹಂಕ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ