Webdunia - Bharat's app for daily news and videos

Install App

‘ಸಮವಸ್ತ್ರ ಪಾಲನೆ ಮಾಡಬೇಕು’

Webdunia
ಗುರುವಾರ, 13 ಅಕ್ಟೋಬರ್ 2022 (15:53 IST)
ಕಂದಾಯ ಸಚಿವ R.ಅಶೋಕ್ ಹಿಜಾಬ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಬಗ್ಗೆ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಇಲ್ಲ, ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು. ಇದು ಸರ್ವಪಾಲನಾ ನಿಯಮವಾಗಿದೆ ಎಂದು ತಿಳಿಸಿದ್ರು. ಈ ನಿಯಮದ ವಿರುದ್ಧವಾಗಿ ಕೆಲವು ವಿದ್ಯಾರ್ಥಿಗಳು ಹೈಕೋರ್ಟ್​​​​ಗೆ ಹೋಗಿದ್ದರು. ಆದರೆ ಹೈಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಿತ್ತು. ಇದೀಗ ಸುಪ್ರೀಂ ಕೋರ್ಟ್​​​​ನಲ್ಲಿ ಭಿನ್ನ ತೀರ್ಪು ಬಂದಿದೆ. ಈಗ ಪ್ರಕರಣ ಸಿಜೆ ಬೆಂಚ್​​ಗೆ ವರ್ಗಾವಣೆ ಆಗಿದೆ. ಅಲ್ಲಿ ಕೂಡ ಸರ್ಕಾರದ ನಿಲುವು ಹಿಜಾಬ್​​​ ವಿರುದ್ಧವೇ ಆಗಿರುತ್ತದೆ ಎಂದ್ರು. ವಿದ್ಯಾರ್ಥಿಗಳು ಮನೆಯಲ್ಲಿ ಏನು ಬೇಕಾದರೂ ವಸ್ತ್ರ ಹಾಕಲಿ, ಆದರೆ ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯವಾಗಿದೆ. ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕೋಡ್ ಇದೆ ಅದರ ಪಾಲನೆ ನಡೆಯುತ್ತಿದೆ. ಇರಾನ್​​ನಲ್ಲಿ ಏನು ನಡೆಯುತ್ತಿದೆ, ಅಲ್ಲಿ ಮಹಿಳೆಯರು ಹಿಜಾಬ್ ಕಿತ್ತು ಬಿಸಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments