Publish Date: Tue, 07 Jan 2020 (15:41 IST)
Updated Date: Tue, 07 Jan 2020 (15:43 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಗಂಭೀರ ಆರೋಪಗಳು ಕೇಳಿಬರತೊಡಗಿವೆ.
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಮೂಕ ಪ್ರೇಕ್ಷಕರಂತೆ ನೋಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.
ಹೀಗಂತ ಸಮಾಜ ಪರಿವರ್ತನಾ ಸಮಿತಿ ಮಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ. ಜೆ.ಎನ್.ಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಘಟನೆ ತಲೆ ತಗ್ಗಿಸುವಂತೆ ಮಾಡಿದೆ.
ಮೌಲ್ಯಗಳನ್ನು ಎತ್ತಿ ಹಿಡಿದಂತಹ ಶರಣರು, ಸಂತರು, ಸೂಫಿಗಳಾದ ಬುದ್ಧ, ಬಸವ, ಅಂಬೇಡ್ಕರ್ ಬಾಳಿದ ಈ ನಾಡಿನಲ್ಲಿ ಸ್ವತಂತ್ರ, ಸಮಾನತೆ ಮತ್ತು ನ್ಯಾಯವನ್ನು ಗಾಳಿಗೆ ತೂರಿ ದೆಹಲಿ ಪೊಲೀಸರು ನಡೆದುಕೊಂಡಿದ್ದಾರೆ ಎಂದು ಟೀಕೆ ಮಾಡಿದ್ರು.