Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವ ಅನಂತಕುಮಾರ ಅಗಲಿಕೆಗೆ ಸಂತಾಪ

ಕೇಂದ್ರ ಸಚಿವ ಅನಂತಕುಮಾರ ಅಗಲಿಕೆಗೆ ಸಂತಾಪ
ಯಾದಗಿರಿ , ಸೋಮವಾರ, 12 ನವೆಂಬರ್ 2018 (14:32 IST)
ಕೇಂದ್ರ ಸಚಿವ ಅನಂತಕುಮಾರ ನಿಧನಕ್ಕೆ  ಬಿಜೆಪಿ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.

ಯಾದಗಿರಿಯ ಲಕ್ಷ್ಮೀ ನಗರದ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಗಲಿದ ಕೇಂದ್ರ ಸಚಿವ ಅನಂತಕುಮಾರ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಮುಖಂಡರು ಹಾಗೂ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಕೇಂದ್ರ ಸಚಿವ ಅನಂತಕುಮಾರ ಅವರು ಸಂಘಟನಾ ಚತುರತೆಯನ್ನು ಹೊಂದಿದ್ದರು. ರಾಜ್ಯದಲ್ಲಿ ಬಿಜೆಪಿ ಬಲವರ್ಧನೆಗೆ ಅಪಾರವಾಗಿ ಶ್ರಮಿಸಿದ್ದರು. ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಕೆಲವೇ ಕೆಲವು ನಾಯಕರಲ್ಲಿ ಅಗ್ರಗಣ್ಯರಾಗಿದ್ದರು ಎಂದು ಸ್ಮರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರು ಹಾಗೂ ಇನ್ನಿತರು ಇದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ನಟ ಪುನೀತ್ ರಾಜ್ ಕುಮಾರ್