Select Your Language

Notifications

webdunia
webdunia
webdunia
webdunia

ಗೌರಿ ಹಬ್ಬದಂದು ಪುತ್ರನಿಗೆ ಎಚ್‌ಎಂಟಿ ವಾಚ್ ಕಟ್ಟಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Central Minister H D Kumaraswamy

Sampriya

ಬೆಂಗಳೂರು , ಶುಕ್ರವಾರ, 6 ಸೆಪ್ಟಂಬರ್ 2024 (16:22 IST)
Photo Courtesy X
ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಎಚ್‌ಎಂಟಿ  ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿದ್ದಾರೆ.  ಇದೀಗ ಗೌರಿ ಹಬ್ಬದ ಶುಭ ದಿನದಂದು ಪುತ್ರ ನಿಖಿಲ್‌ಗೆ ಎಚ್‌ಎಂಟಿ ವಾಚ್ ಗಿಫ್ಟ್ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ:  HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು.

ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು. ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ.

ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಬಳಿ ಆರತಿ ತಟ್ಟೆಗೆ ಹಾಕಲೂ ದುಡ್ಡಿಲ್ಲ, ಇಲ್ಲೂ ಡಿಕೆ ಶಿವಕುಮಾರ್ ಸಹಾಯ