Publish Date: Sun, 11 Aug 2019 (16:25 IST)
Updated Date: Sun, 11 Aug 2019 (16:26 IST)
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಏತನ್ಮಧ್ಯೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.
ಧಾರಾಕಾರ ಮಳೆ ಹಾಗೂ ಬಳ್ಳಾರಿ ನಾಲಾ ಪ್ರವಾಹದಿಂದ ತೀವ್ರ ಹಾನಿಗೊಳಗಾಗಿರುವ ಬೆಳಗಾವಿ ನಗರದ ವಿವಿಧ ಪ್ರದೇಶಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿಯಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಜಿಲ್ಲೆಯಲ್ಲಿ ಪ್ರವಾಹ ಹಾಗೂ ಮಳೆಯಿಂದ ಉಂಟಾಗಿರುವ ಜೀವಹಾನಿ, ಆಸ್ತಿಪಾಸ್ತಿಗಳ ನಷ್ಟ ಹಾಗೂ ಬೆಳೆ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡ್ರು.
ರಸ್ತೆ ಮಾರ್ಗವಾಗಿ ಬೆಳಗಾವಿ ನಗರಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಧಾಮಣೆ ರಸ್ತೆಯಲ್ಲಿ ಸಂಚರಿಸಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡ್ರು.
ಬಳಿಕ ಖಾಸಬಾಗ ಪ್ರದೇಶದಲ್ಲಿರುವ ಪ್ರವಾಹ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಭೇಟಿ ಮಾಡಿದ್ರು. ಸಂತ್ರಸ್ತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿರುವ ಸಾಯಿ ಭವನಕ್ಕೆ ಭೇಟಿ ನೀಡಿದ್ರು. ನಿರ್ಮಲಾ ಸಿತಾರಾಮನ್ ಅವರು, ಜನರ ಅಹವಾಲುಗಳನ್ನು ಆಲಿಸಿದರಲ್ಲದೇ ಆದಷ್ಟು ಬೇಗನೇ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದ್ರು.