Webdunia - Bharat's app for daily news and videos

Install App

ಬೆಂಕಿ ಹಚ್ಚಿ ಆರಿಸುವ ಕೆಲಸ ಸಿದ್ದರಾಮಯ್ಯ ಮಾಡಿದ್ತಾರೆ ಎಂದ ಕೇಂದ್ರ ಸಚಿವ!

Webdunia
ಶನಿವಾರ, 19 ಜನವರಿ 2019 (14:38 IST)
ಇಡೀ ರಾಜ್ಯದ ರಾಜಕಾರಣವನ್ನ ಸದ್ಯ ನಗೆಪಾಟಲಿಗೆ ಈಡಾಗಿಸಿದ್ದಾರೆ. ಏಡಿಗಳನ್ನ ತಟ್ಟೆಯಲ್ಲಿ ಹಾಕಿದ್ರೆ ಪರಸ್ಪರ ಕೈ-ಕಾಲು ಎಳೆಯುವ ರೀತಿಯಲ್ಲಿ ಕಾಂಗ್ರೆಸ್ ಕಚ್ಚಾಟವಿದೆ. ಹೀಗಂತ ಕೇಂದ್ರ ಸಚಿವ ಹರಿಹಾಯ್ದಿದ್ದಾರೆ.

ಮಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಹೇಳಿಕೆ ನೀಡಿದ್ದು, ಕರ್ನಾಟಕದ ರಾಜಕಾರಣವನ್ನ ಹೇಸಿಗೆಯ ತಾಣವಾಗಿ ಪರಿವರ್ತನೆ ಮಾಡಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿ ಕೆಲಸ ಮಾಡಲಾಗ್ತಿಲ್ಲ. ಸಿದ್ದರಾಮಯ್ಯ ಕೆಲಸ ಮಾಡಲು ಬಿಡ್ತಿಲ್ಲ. ಈ ಎಲ್ಲಾ ನಾಟಕದ ಹಿಂದೆ ಸಿದ್ದರಾಮಯ್ಯರ ಪೂರ್ತಿ ಕೈವಾಡವಿದೆ. ಸಿದ್ದರಾಮಯ್ಯರೇ ತನ್ನ ಹಿಂಬಾಲಕರನ್ನ ಬಿಟ್ಟು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡ್ತಿದಾರೆ ಎಂದು ದೂರಿದರು.

ಒಂದು ಕಡೆಯಿಂದ ಸಮಾಧಾನ ಮಾಡುವ ನಾಟಕ, ಮತ್ತೊಂದೆಡೆ ಒಳಗಿಂದೊಳಗೆ ಬೆಂಕಿ ಹಚ್ಚುವ ಕೆಲಸ ಮಾಡ್ತಿದಾರೆ ಎಂದು ಟೀಕೆ ಮಾಡಿದರು.
ಭಾರತೀಯ ಜನತಾ ಪಾರ್ಟಿ ಈ ವಿಚಾರದಲ್ಲಿ ಸ್ಪಷ್ಟವಾಗಿದೆ. ಇವರ ನಾಟಕಗಳು, ಕುಮಾರಸ್ವಾಮಿ ಏನು ಮಾಡ್ತಿದ್ದಾರೆ ಅನ್ನೋದೇ ಗೊತ್ತಿಲ್ಲದೇ ರಾಜ್ಯ ಅಸ್ಥಿರತೆಯ ಪರಾಕಾಷ್ಠೆಯನ್ನ ಮುಟ್ಟಿದೆ. ರಾಜ್ಯ ಅಭಿವೃದ್ಧಿಯಲ್ಲಿ ನೆನೆಗುದಿಗೆ ಬಿದ್ದಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.
ಆದ್ರೆ ಇದು ಕುಮಾರಸ್ವಾಮಿಗೆ ಒಳ್ಳೆಯದೇ ಆಗಿದೆ. ಈ ಕಸರತ್ತುಗಳ ನಡುವೆ ಅವರ ಒಳಗಿಂದೊಳಗಿನ ಕಸರತ್ತು ಬಾಹ್ಯಕ್ಕೆ ಬರಲು ಸಾಧ್ಯವೇ ಇಲ್ಲ. ಇದರಲ್ಲಿ ಸಿದ್ದರಾಮಯ್ಯರೇ ಪಾತ್ರಧಾರಿ, ಅವರೇ ಎಲ್ಲಾ ಆಡಿಸುತ್ತಿರುವುದು.

ಆದರೆ ಸುಮ್ಮನೆ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಜನರಿಗೆ ಆಗ್ತಿರೋ ಅನ್ಯಾಯವನ್ನು ನಮಗೆ ನೋಡಲಿಕ್ಕೆ ಆಗಲ್ಲ. ಅಧಿಕಾರ ಮಾಡಲು ಆಗದೇ ಇದ್ದರೆ ಬಿಟ್ಟು ಬಿಡಿ, ಕಾಂಗ್ರೆಸ್ ಜೊತೆ ಇರಲಿಕ್ಕೆ ಆಗದೇ ಇದ್ದರೆ ಶಾಸಕರು ರಾಜೀನಾಮೆ ಕೊಡಿ. ಸುಮ್ಮನೇ ಈ ದೊಂಬರಾಟದಿಂದ ರಾಜ್ಯದ ಹಿತಾಸಕ್ತಿ ಬಲಿಕೊಡಬೇಡಿ ಎಂದು ಸದಾನಂದ ಗೌಡ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments