Select Your Language

Notifications

webdunia
webdunia
webdunia
webdunia

ಮುಷ್ಕರ ವಾಪಸ್ ಪಡೆದ ನೌಕರರ ಸಂಘ

ಮುಷ್ಕರ ವಾಪಸ್ ಪಡೆದ ನೌಕರರ ಸಂಘ
bangalore , ಬುಧವಾರ, 1 ಮಾರ್ಚ್ 2023 (14:18 IST)
ಸರ್ಕಾರದ ಶೇಕಡಾ 17ರಷ್ಟು ವೇತನ ಹೆಚ್ಚಳ ಆದೇಶವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದ್ದು, ಈ ಮೂಲಕ ಮುಷ್ಕರವನ್ನು ವಾಪಸ್​ ಪಡೆದುಕೊಂಡಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದರು. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು. ಈ ಬೆನ್ನಲ್ಲೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್​.ಷಡಕ್ಷರಿ ಸುದ್ದಿಗೋಷ್ಠಿ ನಡೆಸಿ ಮುಷ್ಕರ ವಾಪಸ್ ಪಡೆದಿರುವುದಾಗಿ ಘೋಷಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಿದೇವೆ- CM