Webdunia - Bharat's app for daily news and videos

Install App

ಕ್ವಾರಂಟೈನ್ ಸೆಂಟರ್ ಗಳಾದ ವಿಶ್ವವಿದ್ಯಾಲಯಗಳು

Webdunia
ಶನಿವಾರ, 18 ಏಪ್ರಿಲ್ 2020 (17:53 IST)
ವಿಶ್ವವಿದ್ಯಾಲಯ ಹಾಗೂ ಕೇಂದ್ರಿಯ ವಿಶ್ವವಿದ್ಯಾಲಯವೊಂದು ಇನ್ಮುಂದೆ ಕ್ವಾರಂಟೈನ್ ಸೆಂಟರ್ ಗಳಾಗಿ ಕೆಲಸ ಮಾಡಲಿವೆ.  

ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿರುವ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ತಾತ್ಕಾಲಿಕವಾಗಿ ಕೊರೊಂಟೈನ್ ಸೆಂಟರ್‍ಗಳನ್ನಾಗಿ ಪರಿವರ್ತಿಸಲಾಗಿದೆ. ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಸಾಂಕ್ರಾಮಿಕ ಕಾಯ್ದೆ 1897, ಕರ್ನಾಟಕ ಕೋವಿಡ್-19 ರೆಗ್ಯುಲೇಶನ್ ಉಪ ಕಲಂ (24) 2020 ನಿಯಮ 12ರಲ್ಲಿ ಹಾಗೂ  Disaster Management Act 2005, ಕಲಂ 25, 26 ಮತ್ತು 30 ರಡಿ ಸಿ.ಆರ್.ಪಿ.ಸಿ. ಕಾಯ್ದೆ 1973 ರ ಕಲಂ 133ರನ್ವಯ ಈ ಆದೇಶ ಹೊರಡಿಸಿದೆ.

ಈ ಎರಡೂ ವಿಶ್ವವಿದ್ಯಾಲಯಗಳ ಕುಲಸಚಿವರು ತಕ್ಷಣವೇ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸುಪರ್ದಿಗೆ ಹಸ್ತಾಂತರಿಸಬೇಕೆಂದು ಡಿ.ಸಿ. ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments