ಮೈತ್ರಿ ಸರಕಾರದಿಂದ ದಲಿತ ಉದ್ದಿಮೆದಾರರಿಗೆ ಅನ್ಯಾಯ; ಆರೋಪ

Webdunia
ಭಾನುವಾರ, 24 ಫೆಬ್ರವರಿ 2019 (15:20 IST)
ರಾಜ್ಯದ ಮೈತ್ರಿ ಸರಕಾರ ಜಾರಿಗೆ ತಂದಿರುವ ಕೈಗಾರಿಕಾ ನೀತಿ ಅನುಷ್ಠಾನ ಸೇರಿದಂತೆ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡದಿರುವುದರಿಂದ ದಲಿತ ಉದ್ದಿಮೆದಾರರಿಗೆ ಅನ್ಯಾಯವಾಗಿದೆ ಎಂದು ರಾಜ್ಯ ದಲಿತ ಉದ್ದಿಮೆದಾರರ ಸಂಘ ಆರೋಪಿಸಿದೆ.

ಕೆಐಎಡಿಬಿ ಮಂಡಳಿಯ-2009-2014 ತೀರ್ಮಾನಗಳ ಅನುಷ್ಠಾನ, ಶೇ. 4 ಬಡ್ಡಿ ದರದಲ್ಲಿ ಕೆಎಸ್ಎಫ್ಸಿ ಮತ್ತು ಬ್ಯಾಂಕುಗಳಿಂದ ಸಾಲ ವಿತರಣೆ ಮತ್ತು ಪ್ರಗತಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಲ್ಲಿ ಅನುದಾನ ಹಂಚಿಕೆ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಫೆ. 26ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಸಂಘದ ಕಾರ್ಯಾಧ್ಯಕ್ಷ ಸಿ.ಜಿ. ಶ್ರೀನಿವಾಸನ್ ಹೇಳಿದ್ದಾರೆ.

ಪರಿಶಿಷ್ಟ ಜಾತಿ/ಪಂಗಡದವರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಉದ್ದಿಮೆ ಸ್ಥಾಪಿಸಲು ಎಲ್ಲ ರೀತಿಯ ಸಹಕಾರ, ಮಾರ್ಗದರ್ಶನ ನೀಡುವ ಸಲುವಾಗಿ ಸಂಘ ಕಾರ್ಯನಿರ್ವಹಿಸುತ್ತಿದ್ದು, ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕೈಗಾರಿಕಾ ನೀತಿ ಮತ್ತು ಆಯೋಗಗಳಲ್ಲಿ ಯೋಜನೆಗಳನ್ನು ಘೋಷಿಸಿ ಅನುಷ್ಠಾನಗೊಳಿಸಿದ್ದರೂ ನಿಗದಿತ ಗುರಿ ತಲುಪುವಲ್ಲಿ ಸಾಧ್ಯವಾಗಿಲ್ಲ. ಎಲ್ಲ ವಿಷಯಗಳ ಕುರಿತು ಚರ್ಚೆ ನಡೆಸಲು ಸಭೆ ಕರೆಸಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments