Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಹೇಳದಿದ್ದರೆ ಹೀಗೆ ಆಗೋದು

ಕೊರೊನಾ ಸೋಂಕಿತ
ಕೊರೊನಾ ಸೋಂಕಿತರು ತಮ್ಮ ಟ್ರಾವೆಲ್ ಹಿಸ್ಟರಿ ಸರಿಯಾಗಿ ಹೇಳದಿರುವುದರಿಂದ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಮಟಾದಲ್ಲಿ ಪತ್ತೆಯಾಗುವ ಸೋಂಕಿತರು ತಮ್ಮ ಟ್ರಾವೆಲ್ ಹಿಸ್ಟರಿಯನ್ನು ಬಚ್ಚಿಟ್ಟು ಇನ್ನಷ್ಟು ಜನರಿಗೆ ಸೋಂಕು ಹರಡುವಂತೆ ಮಾಡಿದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.

ಹೀಗಂತ ಕುಮಟಾ ಉಪವಿಭಾಗಾಧಿಕಾರಿ ಅಜಿತ್ ಎಂ. ಎಚ್ಚರಿಸಿದ್ದಾರೆ.

ಕುಮಟಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಸೋಂಕಿತರ ಟ್ರಾವೆಲ್ ಹಿಸ್ಟರಿ ಸಮರ್ಪಕವಾಗಿ ದೊರೆಯದೇ ಇರುವುದು ಮೂಲ ಕಾರಣವಾಗಿದೆ. ಇನ್ನು ಮುಂದೆ ಕೊರೊನಾ ತಡೆಯಲು ಕುಮಟಾದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇವೆ.

ಸೋಂಕಿತ ವ್ಯಕ್ತಿಗಳು ತಮ್ಮ ಟ್ರಾವೆಲ್ ಹಿಸ್ಟರಿಯನ್ನು ಸಮರ್ಪಕವಾಗಿ ನೀಡದೇ ಸೋಂಕು ಇನ್ನಷ್ಟು ಜನರಿಗೆ ಹರಡುವಂತಾದರೆ ಅಂಥ ಸೋಂಕಿತನನ್ನು ಗುರುತಿಸಿ, ಆತ ಗುಣಮುಖನಾದ ಮೇಲೆ ಅವನ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಗೆದ್ದ 96 ವರ್ಷದ ವೃದ್ಧೆ ಮನೆಯಲ್ಲಿ ಸಂಭ್ರಮ