Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣ: ಸಚಿವ ಅನಂತ್‌ಕುಮಾರ್

ಅನಂತಕುಮಾರ್
ಮಂಗಳೂರು ಚಲೋ ಬೈಕ್ ರ್ಯಾಲಿಗೆ ಸರಕಾರ ತಡೆಯೊಡ್ಡಿರುವುದನ್ನು ಕೇಂದ್ರ ಸಚಿವ ಅನಂತ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ಎಷ್ಟೇ ನಿರ್ಭಂಧ ಹೇರಿದರೂ ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.
 
ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ಮತ್ತು ಹಿಂದು ಪರ ನಾಯಕರ ಹತ್ಯೆ ಖಂಡಿಸಿ ಹೋರಾಟ ಮುಂದುವರಿಯಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
 
ಮಂಗಳೂರು ಚಲೋ ಕಾರ್ಯಕ್ರಮವನ್ನು ಶಾಂತಿಯುವಾಗಿ ನಡೆಸಲಾಗುವುದು ಎಂದು ಬಿಜೆಪಿ ನಾಯಕರು ಭರವಸೆ ನೀಡಿದ್ದರೂ ಸರಕಾರ ಅನಗತ್ಯವಾಗಿ ಬೈಕ್ ರ್ಯಾಲಿಗೆ ತಡೆಯೊಡ್ಡಿದೆ. ಇಂತಹ ಸರಕಾರಕ್ಕೆ ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸ್ಮಾರ್ಟ್ ಫೋನ್`ನಲ್ಲಿ ಪೋರ್ನ್ ನೋಡಿದರೆ ಹಳ್ಳಕ್ಕೆ ಬೀಳೋದು ಗ್ಯಾರಂಟಿ..!