Publish Date: Fri, 01 Nov 2019 (15:51 IST)
Updated Date: Fri, 01 Nov 2019 (15:55 IST)
ಮಹಾರಾಷ್ಟ್ರದಲ್ಲಿ ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನರು ಮನೆಗೆ ಕಳಿಸಿದ್ದಾರೆ. ಹೀಗಾಗಿ ಅದೇ ರೀತಿಯಲ್ಲಿ ರಾಜ್ಯದ ಮತದಾರರು ಅನರ್ಹರಿಗೆ ಸೋಲಿನ ರುಚಿ ತೋರಿಸಲಿದ್ದಾರೆ. ಹೀಗಂತ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಇನ್ನು, ಕಾಂಗ್ರೆಸ್ ನಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸೋಕೆ ಸ್ವಾತಂತ್ರ್ಯವಿದೆ. ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ರೀತಿಯ ಅಸಮಧಾನ, ಭಿನ್ನಾಭಿಪ್ರಾಯ ಇಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ನಡೆಯೋ ಉಪಚುನಾವಣೆಗೆ ಕೈಪಾಳೆಯದ ಅಭ್ಯರ್ಥಿಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ. ಕಾಂಗ್ರೆಸ್ 12ಕ್ಕೂಹೆಚ್ಚು ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಲಿದೆ ಅಂತ ಸಿದ್ದರಾಮಯ್ಯ ಹೇಳಿದ್ರು.