Publish Date: Mon, 18 Nov 2019 (09:08 IST)
Updated Date: Mon, 18 Nov 2019 (09:09 IST)
ಬೆಳಗಾವಿ : ಬಿಜೆಪಿ ಸೇರ್ಪಡೆಯಾಗುವುದಕ್ಕೆ ಕಾರಣವೆನೆಂಬುದನ್ನು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಮಕ್ಕಳ ಮೇಲೆ ಪ್ರಮಾಣ ಮಾಡುವ ಮೂಲಕ ತಿಳಿಸಿದ್ದಾರೆ.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷ ಸೇರಿದ್ದೇನೆ. ಇದರಲ್ಲಿ ನಾನು 1 ರೂ. ಪಡೆದಿಲ್ಲ ಎಂದು ಮಕ್ಕಳ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಹಾಗೇ ಮುಂಬೈನಲ್ಲಿಯೂ ಸ್ವಂತ ಹಣದಲ್ಲಿಯೇ ಊಟ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೇ ಶಾಸಕನಾದ ಮೇಲೆ ಕ್ಷೇತ್ರದಲ್ಲಿ ಒಂದು ಕೆಲಸವೂ ಆಗಿಲ್ಲ. ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಲಾಯಿತು. ಹೀಗಾಗಿ ಸಿಎಂ ಬಿಎಸ್ ವೈ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾತನಾಡಿದಾಗ ಅವರು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಕ್ಕೆ ಬಿಜೆಪಿ ಸೇರಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.