Select Your Language

Notifications

webdunia
webdunia
webdunia
webdunia

ಕಾಫಿನಾಡಲ್ಲಿ ದಾಖಲೆಯಿಲ್ಲದ 9 Kg ಚಿನ್ನ ಜಪ್ತಿ

ಕಾಫಿನಾಡಲ್ಲಿ ದಾಖಲೆಯಿಲ್ಲದ 9 Kg ಚಿನ್ನ ಜಪ್ತಿ
chikamangaluru , ಶುಕ್ರವಾರ, 24 ಮಾರ್ಚ್ 2023 (16:50 IST)
ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 2.30 ಕೋಟಿ ರೂ. ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚುನಾವಣೆ ನಿಮಿತ್ತ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ ತರೀಕೆರೆ ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ನಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಿಕಪ್ ವಾಹನದಲ್ಲಿ ಚಿನ್ನದ ಸರಗಳು ಹಾಗೂ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದೆ. ಚಿಕ್ಕಮಗಳೂರು SP ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನೂ ವಶಪಡಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರ್ಕಾರದ ವಿರುದ್ದ ಕೈ ನಾಯಕರ ಧರಣಿ