ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 24 ನೇ 'ಮನ್ ಕೀ ಬಾತ್' ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕಾಶ್ಮೀರದ ಉರಿ ಉಗ್ರ ಕೃತ್ಯದಲ್ಲಿ ಹುತಾತ್ಮರಾದ 18 ಯೋಧರಿಗೆ ಗೌರವ ನಮನ ಸಲ್ಲಿಸಿದರು. ಜೊತೆಗೆ ಉಗ್ರ ಕೃತ್ಯದ ರೂವಾರಿಗಳನ್ನು ಸುಮ್ಮನೆ ಬಿಡುವುದಿಲ್ಲ. ದಾಳಿಕೋರರಿಗೆ ಶಿಕ್ಷೆ ಖಚಿತ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.
ಭಾರತೀಯ ಸೈನ್ಯದ ಮೇಲೆ ನಂಬಿಕೆ ಹಾಗೂ ವಿಶ್ವಾಸವಿದೆ. ನಮ್ಮ ಸೈನಿಕರು ನಮಗೆ ಹೆಮ್ಮೆ. ಉರಿ ಉಗ್ರ ಕೃತ್ಯದ ರೂವಾರಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದರು.
ಸ್ವಚ್ಛ ಭಾರತ ಯೋಜನೆ ಎರಡು ವರ್ಷ ಪೂರೈಸಲಿದೆ. ಗ್ರಾಮೀಣ ಪ್ರದೇಶದಲ್ಲಿ 2.48 ಕೋಟಿ ಶೌಚಾಲಯ ನಿರ್ಮಾಣವಾಗಿದ್ದು, ಮುಂದಿನ ವರ್ಷದ ಅವಧಿಯಲ್ಲಿ 1.5 ಕೋಟಿ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ. ಅಕ್ಟೋಬರ್ 2 ರಂದು ನಡೆಯಲಿರುವ ಸ್ವಚ್ಛತಾ ಅಭಿಯಾನಕ್ಕೆ ದೇಶದ ಎಲ್ಲಾ ನಾಗರಿಕರು ಕೈ ಜೋಡಿಸಬೇಕು. ಇದಕ್ಕಾಗಿ 2 ರಿಂದ 4 ಗಂಟೆ ಸಮಯ ನೀಡಬೇಕು ಎಂದು ಮನವಿ ಮಾಡಿಕೊಂಡರು.
'ಮನ್ ಕೀ ಬಾತ್' ಕಾರ್ಯಕ್ರಮದಲ್ಲಿ ರಾಜಕೀಯ ಮಾಡುವುದಿಲ್ಲ. ಹಾಗೂ ಸರಕಾರವನ್ನು ಪ್ರಶಂಸಿಸುವ ಕೆಲಸ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಈ ವೇಳೆ ದೀನ ದಯಾಳ್ ಉಪಾಧ್ಯಾಯ ಅವರನ್ನು ಸ್ಮರಿಸಿದರು.
ಇದೇ ಸಮಯದಲ್ಲಿ ರಿಯೋ ಪ್ಯಾರಾ ಒಲಿಂಪಿಕ್ಸ್‌ನ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ