ರಾಜಕೀಯದಲ್ಲಿ ತನ್ನ ಹೆಸರು ಬಳಕೆ: ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ದೂರು

Sampriya
ಶನಿವಾರ, 5 ಅಕ್ಟೋಬರ್ 2024 (17:45 IST)
Photo Courtesy X
ಬೆಂಗಳೂರು: ನಾನು ಮುಸ್ಲಿಂ ಕುಟುಂಬದಲ್ಲಿ ಹುಟ್ಟಿ, ಇಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಕಾರಣಕ್ಕೆ ಬಿಜೆಪಿ ತನ್ನ ಹೆಸರನ್ನು ರಾಜಕೀಯಕ್ಕೆ ತಳುಕು ಹಾಕುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರು ಬಿಜೆಪಿ ಮಾಧ್ಯಮ ಘಟಕದ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಈಚೆಗೆ ವೀರ ಸಾವರ್ಕರ್ ಕುರಿತು ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಬಿಜೆಪಿ, ಸಚಿವರ ಪತ್ನಿ  ಟಬು ರಾವ್ ಅವರ ಹೆಸರನ್ನ ಪ್ರಸ್ತಾಪಿಸಿತ್ತು. ಈ ಸಂಬಂಧ  ಬಿಜೆಪಿ ಟ್ವೀಟ್ ನಲ್ಲಿ ತಮ್ಮ ಹೆಸರನ್ನ ಎಳೆದು ತಂದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಈ ಬಗ್ಗೆ ಸಂಬಂಧಪಟ್ಟವರನ್ನ ಕರೆಸಿ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗೂ ಸಂಬಂಧವಿಲ್ಲ. ಮುಸ್ಲಿಂ ಕುಟುಂಬದಿಂದ ಬಂದು, ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ನನ್ನ ಹೆಸರನ್ನು ತಳುಕು ಹಾಕುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಜಕೀಯವಾಗಿ ಟೀಕೆ ಟಿಪ್ಪಣಿ ಮಾಡುವಾಗ ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯ ಶಾಸಕ ಯತ್ನಾಳ್ ಅವರು ಇದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಟಬು ರಾವ್ ಅವರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ಮುಂದಿನ ಸುದ್ದಿ
Show comments