Publish Date: Sat, 01 Dec 2018 (11:39 IST)
Updated Date: Sat, 01 Dec 2018 (11:41 IST)
ಬೆಂಗಳೂರು: ತೆಲಂಗಾಣದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಬಳಸಿಕೊಳ್ಳಲಾಗುತ್ತಿದೆ.
ಈಗಾಗಲೇ ಸಚಿವ ಡಿಕೆ ಶಿವಕುಮಾರ್ ತೆಲಂಗಾಣದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ಜತೆಗೆ ಇದೀಗ ಸಚಿವ ಯುಟಿ ಖಾದರ್ ಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದೆ.
ಅದೇ ಕಾರಣಕ್ಕೆ ಪ್ರಸ್ತುತ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ಸಚಿವ ಖಾದರ್ ಹೈದರಾಬಾದ್ ನತ್ತ ತೆರಳಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ