ದಾವಣಗೆರೆ: ಮಾರ್ಚ್ 3ರಿಂದ 21ರವರೆಗೆ ವಿಧಾನಸಭೆಯ ಬಜೆಟ್ ಅಧಿವೇಶನ ಎರಡು ಹಂತದಲ್ಲಿ ನಡೆಯಲಿದೆ.
ಈ ಬಗ್ಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಪ್ರತಿಕ್ರಿಯಿಸಿ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಎಂದರು.
ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು ಮೂರು ದಿನಗಳ ಕಾಲಾವಕಾಶವಿದೆ. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದ ರೂಪುರೇಷ ಸಿದ್ಧವಾಗುತ್ತಿದೆ ಎಂದರು.
ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸಂಬಂಧಿಸಿದ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಸಾಮಾಜಿಕ ಮಾಧ್ಯಮದಲ್ಲಿ ವದಂತಿ ಹರಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.