ಉತ್ತರಾಖಂಡ್ ನ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮನಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 
	ಶನಿವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖತಿಮಾ ಶಾಸಕ ಪುಷ್ಕರ್ ಸಿಂಗ್ ಧಮನಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಇಂದು ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅನಿವಾರ್ಯ ಕಾರಣಗಳಿಂದ ಭಾನುವಾರಕ್ಕೆ ಮುಂದೂಡಲಾಗಿದೆ.
 
 			
 
 			
			                     
							
							
			        							
								
																	
	ತೀರ್ಥ್ ಸಿಂಗ್ ಶನಿವಾರ ರಾಜ್ಯಪಾಲ ಬೇಬಿ ರಾಣಿ ಮೌರ್ಯ ರಾಜೀನಾಮೆ ಸಲ್ಲಿಸಿದ ನಂತರ ಪುಷ್ಕರ್ ಸಿಂಗ್ ಧಮನಿ ಮುಖ್ಯಮಂತ್ರಿ ಸ್ಥಾನಕ್ಕೆ ಮನವಿ ಪತ್ರ ಸಲ್ಲಿಸಿದರು.
	ಪುಷ್ಕರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕಳೆದ 4 ತಿಂಗಳಲ್ಲಿ ಉತ್ತರಾಖಂಡ್ ನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ನಾಲ್ಕನೇ ಬಿಜೆಪಿ ಶಾಸಕರಾಗಿದ್ದಾರೆ. ಮುಂದಿನ ವರ್ಷ ಉತ್ತರಾಖಂಡ್ ನ ವಿಧಾನಸಭಾ ಚುನಾವಣೆ ನಡೆಯಲಿದೆ.