Publish Date: Mon, 02 Jul 2018 (09:51 IST)
Updated Date: Mon, 02 Jul 2018 (09:53 IST)
ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ವಿ ಧನಂಜಯ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಸಚಿವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಐದು ದಿನಗಳಿಂದ ಅವರಿಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದೀಗ ಆರೋಗ್ಯ ಸ್ಥಿತಿ ಉಲ್ಬಣಿಸಿದ ಹಿನ್ನಲೆಯಲ್ಲಿ ಐಸಿಯುವಿಗೆ ಶಿಫ್ಟ್ ಮಾಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ, ವಕ್ತಾರರಾಗಿ ಧನಂಜಯ ಕುಮಾರ್ ಕೆಲಸ ಮಾಡಿದ್ದರು. ಇತ್ತೀಚೆಗಷ್ಟೇ ಬಿಜೆಪಿ ತೊರೆದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.