ಸಂಪುಟ ಪುನಾರಚನೆ ಸಂದರ್ಭದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಕೈಬಿಡಲಾಗುತ್ತದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ, ಅವರನ್ನು ಕೈಬಿಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಐವರು ಸಂಸದರು ಮನವಿ ಮಾಡಿದ್ದಾರೆ.
ಸಂಸದರಾದ ಮುದ್ದುಹನುಮೇಗೌಡ, ಚಂದ್ರಪ್ಪ ಅವರು ಜಂಟಿ ಹೇಳಿಕೆ ನೀಡಿ, ರಾಜ್ಯಕ್ಕೆ ಶ್ರೀನಿವಾಸ್ ಪ್ರಸಾದ್ ಅವರ ಸೇವೆ ಅಗತ್ಯವಾಗಿದ್ದರಿಂದ ಅವರನ್ನು ಸಂಪುಟದಿಂದ ಕೈಬಿಡಬಾರದು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಕೋರಿದ್ದಾರೆ
ಅಗತ್ಯವಾದಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರೊಂದಿಗೆ ಚರ್ಚೆ ನಡೆಸಲಾಗುವುದು. ತುಮಕೂರು ದೊಡ್ಡ ಜಿಲ್ಲೆಯಾಗಿದ್ದರಿಂದ ಕನಿಷ್ಠ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಮುಂದಿನ ಎರಡು ವರ್ಷಗಳಲ್ಲಿ ವಿಧಾನಸಭೆಗೆ ಚುನಾವಣೆ ಎದುರಾಗಲಿರುವುದರಿಂದ ಸಚಿವ ಸಂಪುಟದಲ್ಲಿರುವ ಹಿರಿಯ ಸಚಿವರನ್ನು ಕೈಬಿಡುವುದು ಸೂಕ್ತವಾಗುವುದಿಲ್ಲ ಎನ್ನುವುದು ನಮ್ಮ ವೈಯಕ್ತಿಕ ಅನಿಸಿಕೆಯಾಗಿದೆ ಎಂದು ಹೇಳಿದ್ದಾರೆ.
ಸಂಪುಟ ಪುನಾರಚನೆಯಲ್ಲಿ ಕನಿಷ್ಠ 12 ರಿಂದ 15 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಮುಖಗಳಿಗೆ ಮಣೆಹಾಕಿ ಸರಕಾರದ ಯೋಜನೆಗಳಿಗೆ ವೇಗದ ಚಾಲನೆ ನೀಡಬೇಕು ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಿಂತನೆಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ