ಬಿಜೆಪಿ ಮುಖಂಡ ವಿ.ಸೋಮಣ್ಣ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಕೆ ನಡೆಸುವಂತೆ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದೆ.
ಕಳೆದ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಆಸ್ತಿಯ ವಿವರಕ್ಕೂ ಇಂದಿನ ಆಸ್ತಿಯ ವಿವರಕ್ಕೂ ಭಾರಿ ಹೆಚ್ಚಳ ಕಂಡು ಬಂದಿದ್ದರಿಂದ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ರಾಮಕೃಷ್ಣ ಎನ್ನುವವರು ದೂರು ಸಲ್ಲಿಸಿದ್ದರು.
ದೂರಿನ ವಿಚಾರಣೆ ನಡೆಸಿದ ಕೋರ್ಟ್, ಸೋಮಣ್ಣ ಅವರ ವಿರುದ್ಧ ತನಿಖೆ ನಡೆಸಿ ಡಿಸೆಂಬರ್ 17ರೊಳಗೆ ವರದಿ ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶಿಸಿದೆ.
ಕರ್ನಾಟಕ ಚುನಾವಣಾ ಕಾವಲು (ಕೆಇಡಬ್ಲ್ಯೂ) ಸಂಸ್ಥೆ ರಾಜ್ಯದಲ್ಲಿ ಕೋಟಿ ಕೋಟಿ ಸಂಪಾದನೆ ಮಾಡಿರುವ ಶಾಸಕ, ಸಚಿವರ ವಿವರಗಳಿದೆ. ವಿ. ಸೋಮಣ್ಣ ಅವರ ಹೆಸರು ಕೂಡಾ ಈ ಪಟ್ಟಿಯಲ್ಲಿ ಕಾಣಿಸಿದೆ. ಚರಾಸ್ತಿ 9.16 ಕೋಟಿ ಹಾಗೂ ಸ್ಥಿರಾಸ್ತಿ 1.83 ಕೋಟಿ ರೂ. ಘೋಷಿತ ಆಸ್ತಿಯಾಗಿದೆ. ಈಗ ಈ ಮೊತ್ತ ಶೇ 205ರಷ್ಟು ಏರಿಕೆಯಾಗಿರುವುದರಿಂದ ಲೋಕಾಯುಕ್ತ ಕೋರ್ಟ್ ತನಿಖೆಗೆ ಆದೇಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ