ಲೋಕಸಭೆ ಟಿಕೆಟ್ ಅನುಮಾನ ಎಂಬಂತಿದ್ದ ಸೋಮಣ್ಣಗೆ ಈಗ ಸಚಿವ ಸ್ಥಾನದ ಲಾಟರಿ

Krishnaveni K
ಭಾನುವಾರ, 9 ಜೂನ್ 2024 (14:57 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕ ವಿ. ಸೋಮಣ್ಣಗೆ ಟಿಕೆಟ್ ನೀಡುವುದೇ ಅನುಮಾನ ಎನ್ನುವ ಸ್ಥಿತಿಯಿತ್ತು. ಆದರೆ ಇದೀಗ ತುಮಕೂರಿನಿಂದ ಗೆದ್ದ ಸೋಮಣ್ಣಗೆ ಕೇಂದ್ರ ಸಚಿವರಾಗುವ ಯೋಗ ಕೂಡಿಬಂದಿದೆ.

ಈ ಬಾರಿ ಮೋದಿ ಸರ್ಕಾರದಲ್ಲಿ ರಾಜ್ಯ ಬಿಜೆಪಿಯ ಮೂವರಿಗೆ ಸಚಿವ ಸ್ಥಾನ ದೊರೆಯಲಿದೆ. ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ದರ್ಜೆ ಮತ್ತೊಮ್ಮೆ ಪ್ರಾಪ್ತಿಯಾಗಲಿದೆ. ಇನ್ನು, ಈ ಹಿಂದೆ ಕೇಂದ್ರದಲ್ಲಿ ರಾಜ್ಯ ಖಾತೆ ಸಚಿವೆಯಾಗಿ ಅನುಭವಿಯಾಗಿರುವ ಶೋಭಾ ಕರಂದ್ಲಾಜೆಗೆ ಈಗ ಮತ್ತೊಮ್ಮೆ ರಾಜ್ಯ ಖಾತೆ ಹೊಣೆ ಸಿಗಲಿದೆ.

ಇದಲ್ಲದೆ, ಅಚ್ಚರಿಯೆಂಬಂತೆ ವಿ. ಸೋಮಣ್ಣಗೆ ರಾಜ್ಯ ಖಾತೆ ಸಿಗುತ್ತಿದೆ. ತುಮಕೂರಿನಲ್ಲಿ ಈ ಬಾರಿ ಸೋಮಣ್ಣಗೆ ಲೋಕಸಭೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳಿತ್ತು. ಕಳೆದ ವಿಧಾನಸಭೆಯಲ್ಲಿ ಸೋತಿದ್ದ ಅವರಿಗೆ ಟಿಕೆಟ್ ನೀಡಬಾರದು ಎಂಬ ಕೂಗೂ ಇತ್ತು.

ಆದರೂ ಕೊನೆಗಳಿಗೆಯಲ್ಲಿ ಅವರಿಗೆ ತುಮಕೂರಿನಿಂದ ಬಿಜೆಪಿ ಟಿಕೆಟ್ ಸಿಕ್ಕಿತ್ತು. ಅಷ್ಟೇ ಅಲ್ಲದೆ, ಈ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಅದರ ಜೊತೆಗೆ ಈಗ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುತ್ತಿರುವುದು ಅವರಿಗೆ ಲಾಟರಿ ಹೊಡೆದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments