Select Your Language

Notifications

webdunia
webdunia
webdunia
webdunia

"ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ" ಕಾಮಗಾರಿ ಪರಿಶೀಲನೆ ಮಾಡಿದ ವಿ ಸೋಮಣ್ಣ

V Somanna
bangalore , ಗುರುವಾರ, 23 ಜೂನ್ 2022 (19:46 IST)
somana
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ "ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ " ಕಾಮಗಾರಿಯನ್ನ ವಸತಿ ಸಚಿವ ವಿ.ಸೋಮಣ್ಣ ಇಂದು ಪರಿಶೀಲನೆ ನಡೆಸಿದರು. ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಿಸುವ ಸಲುವಾಗಿ ಮಂಜುನಾಥನಗರದ ಬಳಿ ಮೇಲುಸೇತುವೆ, ಶಿವನಗರ 1 ಮತ್ತು 8ನೇ ಮುಖ್ಯ ರಸ್ತೆಯ ಕೂಡು ಸ್ಥಳದಲ್ಲಿ ಕೆಳಸೇತುವೆ ಹಾಗು ಬಸವೇಶ್ವರ ನಗರ ವೃತ್ತದ ಏಕಮುಖ ಸಂಚಾರದ ಬಳಿ ಮೇಲುಸೇತುವೆಯ ಗ್ರೇಡ್ ಸೆಪರೇಟರ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಬಸವೇಶ್ವರ ಜಂಕ್ಷನ್ ಬಳಿ ಹೆಚ್ಚುವರಿ ಏಕಮುಖ ಸಂಚಾರದ ಮೇಲುಸೇತುವೆಯನ್ನು 20.925 ಕೋಟಿ ರೂ. ವೆಚ್ಚದಲ್ಲಿ ಒಟ್ಟು 467.35 ಮೀ ಉದ್ದ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರಕಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿ ಆಗಸ್ಟ್ ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಚಿವ ವಿ ಸೋಮಣ್ಣ  ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯಪುಸ್ತಕ ಕೈ ಬಿಡುವ ವಿಚಾರವೇ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ಸ್ಪಷ್ಠಣೆ