Select Your Language

Notifications

webdunia
webdunia
webdunia
webdunia

ಮಹಿಳೆಯರಿಗೆ ಈ ಒಂದು ಅನುಕೂಲ ಮಾಡಿಕೊಟ್ಟಿದ್ದು ವಿ ಶ್ರೀನಿವಾಸ್ ಪ್ರಸಾದ್

V Srinivas Prasad

Krishnaveni K

ಬೆಂಗಳೂರು , ಸೋಮವಾರ, 29 ಏಪ್ರಿಲ್ 2024 (10:49 IST)
Photo Courtesy: X
ಬೆಂಗಳೂರು: ಬಹು ಅಂಗಾಗ ವೈಫಲ್ಯ, ಹೃದಯಾಘಾತದಿಂದಾಗಿ ನಿಧನರಾದ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರ ಕುರಿತಾದ ಇಂಟ್ರೆಸ್ಟಿಂಗ್ ವಿಚಾರಗಳು ಇಲ್ಲಿವೆ.

ವಿ ಶ್ರೀನಿವಾಸ್ ಪ್ರಸಾದ್ ದಲಿತ ಮುಖಂಡರಾಗಿ ಹೆಸರು ಮಾಡಿದವರು. 1947 ರಲ್ಲಿ ಜನಿಸಿದ ಅವರು ರಾಜ್ಯ ಶಾಸ್ತ್ರದಲ್ಲಿ ಎಂಎ ಪದವಿ ಮಾಡಿದ್ದಾರೆ. 1974 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. 1980 ರಲ್ಲಿ ಚಾಮರಾಜನಗರದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 1999 ರಲ್ಲಿ ಜೆಡಿಯು ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. 2019 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದರು. 1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಕೇಂದ್ರ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

2008, 2013 ರಲ್ಲಿ ಕಾಂಗ್ರೆಸ್ ನಿಂದ ವಿಧಾನಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕೆಲಸ ಮಾಡಿದ್ದರು. ಈ ವೇಳೆ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದ ಹೆಗ್ಗಳಿಕೆ ಅವರದ್ದು.

ಆದರೆ 2017 ರ ಸಚಿವ ಸಂಪುಟ ವಿಸ್ತರಣೆ ವೇಳೆ ತಮ್ಮನ್ನು ಕೈ ಬಿಟ್ಟಿದ್ದಕ್ಕೆ ಬೇಸರಗೊಂಡು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯಿಂದ 2018 ರಲ್ಲಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಆದರೆ ಚಾಮರಾಜನಗರದಿಂದ 2019 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ಇತ್ತೀಚೆಗೆ ಸಿದ್ದರಾಮಯ್ಯನವರ ಮೇಲೆ ಹಳೆಯ ಮುನಿಸು ಮರೆತು ಒಂದಾಗುವ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲೇ ಇಹಲೋಕವನ್ನೇ ತ್ಯಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬಾಗಲಕೋಟೆಯಲ್ಲಿ ಮೋದಿ ಮೋಡಿ