Select Your Language

Notifications

webdunia
webdunia
webdunia
webdunia

ಕೂಡಲೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಬೇಕು : ಹೆಚ್‍ಡಿಕೆ

ಕೂಡಲೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಬೇಕು : ಹೆಚ್‍ಡಿಕೆ
ಹಾಸನ , ಗುರುವಾರ, 20 ಜನವರಿ 2022 (17:14 IST)
ಹಾಸನ : ‘ಶಾಲೆ, ಕಾಲೇಜು ಹಾಗೂ ಹಾಸ್ಟೆಲ್’ಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬರುತ್ತಿದ್ದು,

ಸರ್ಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15 ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ಚನ್ನಪಟ್ಟಣದ ಹೊಂಗನೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್ ಮಾಡಿಸಬೇಕು ಎಂದರು.

 
ತಜ್ಞರಲ್ಲಿ ಕೆಲವರು ಶಾಲೆಗಳನ್ನು ತೆರೆಯುವಂತೆ ಘೋಷಿಸುವುದಕ್ಕೆ ಪರ-ವಿರೋಧ ಇದೆ ಎಂಬುದರ ಕುರಿತು ಮಾತನಾಡಿದ ಅವರು, ತಜ್ಞರು ಪರ ಅಥವಾ ವಿರೋಧ ಎನ್ನುವ ಮಾತು ಬೇರೆ. ಆದರೆ, ಸರ್ಕಾರದ ಮುಂದೆ ಕೋವಿಡ್ ಸ್ಥಿತಿಗತಿಗಳ ಬಗ್ಗೆ ವಾಸ್ತವಾಂಶಗಳಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ಮುಂದಿರುವ ಆಯ್ಕೆಗಳೇನು?