Select Your Language

Notifications

webdunia
webdunia
webdunia
Friday, 25 April 2025
webdunia

3 ಸಾವಿರ ಮಂದಿಗೆ ಲಸಿಕೆ ಅಭಿಯಾನ

ಅಭಿಯಾನ
ಬೆಂಗಳೂರು , ಶನಿವಾರ, 16 ಅಕ್ಟೋಬರ್ 2021 (09:38 IST)
ಬೆಂಗಳೂರು : ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ನಿರಾಶ್ರಿತರು, ಸ್ವಚ್ಛತಾ ಕಾರ್ಮಿಕರು, ಕೂಲಿ ಕಾರ್ಮಿಕರು ಸೇರಿದಂತೆ ಮೂರು ಸಾವಿರ ಮಂದಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನವನ್ನು ಜಂಬೂಸವಾರಿ ದಿಣ್ಣೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಕೃಷ್ಣಪ್ಪ,' ಬಿಜೆಪಿಗರು ಕೋವಿಡ್ಗೆ ಹೆದರಿ ಮನೆಯಲ್ಲಿ ಅಡಗಿ ಕೂತಿದ್ದರು. ಅಂತಹ ಸಂದರ್ಭದಲ್ಲೂ ಆರ್.ಕೆ.ರಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಲಸಿಕೆ ಅಭಿಯಾನದ ಮೂಲಕ ಕ್ಷೇತ್ರದ ಜನರ ನೆರವಿಗೆ ನಿಂತಿರುವುದು ಶ್ಲಾಘನೀಯ' ಎಂದರು.
ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್, 'ಅಭಿವೃದ್ದಿ ವಂಚಿತ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ದುರಾಡಳಿತ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಮಾಡಬೇಕು' ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಬೈಎಲೆಕ್ಷನ್ ಗೆಲುವಿಗೆ ಬಿಜೆಪಿ ಮಾಸ್ಟರ್ ಪ್ಲಾನ್: BSY