Select Your Language

Notifications

webdunia
webdunia
webdunia
webdunia

ರಾಜ್ಯದ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗೆ ಆದ್ಯತೆ ಮೇರೆಗೆ ಲಸಿಕೆ

ರಾಜ್ಯದ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗೆ ಆದ್ಯತೆ ಮೇರೆಗೆ ಲಸಿಕೆ
bangalore , ಶುಕ್ರವಾರ, 23 ಜುಲೈ 2021 (19:44 IST)
ಬೆಂಗಳೂರು: ಜುಲೈ 26ರಿಂದ ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ಸರಕಾರ ನಿರ್ಧರಿಸಿರುವ ಬೆನ್ನಲ್ಲಿಯೇ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗೂ ಆದ್ಯತೆ ಮೇರೆಗೆ ಲಸಿಕೆ ನೀಡಲು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದರು. 
 
ಈ ಸಂಬಂಧ ಕೋವಿಡ್ ಲಸಿಕೀಕಾರಣದ ಪ್ರಗತಿ ಪರಿಶೀಲನೆಗಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ  ಸಭೆಯಲ್ಲಿ  ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. 
 
ಈ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಲಸಿಕೆ ನೀಡಲು ಅಭಿಯಾನ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿನೆ ನೀಡಿದ್ದಾರೆ
 
ಸಿಬ್ಬಂದಿಗಳ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗೆ ನೀಡಿ: 
 
ಕೋವಿಡ್ ಲಸಿಕೀಕರಣಕ್ಕಾಗಿ ಜಿಲ್ಲೆಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರು, ಬೋಧಕ-ಬೋಧಕೇತರ ಸಿಬ್ಬಂದಿಗಳ (ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಿಸಿ) ಪಟ್ಟಿಯನ್ನು ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಬೇಕು. ಪ್ರತಿ ಶಾಲೆಯ ಮುಖ್ಯಸ್ಥರು ಒಬ್ಬ  ನೋಡಲ್ ಅಧಿಕಾರಿಯನ್ನು ನಿಯೋಜಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಅರುಂಧತಿ ಸೂಚಿಸಿದ್ದಾರೆ.
 
ಸ್ಥಳ ಸಮಯ ನಿಗದಿ:
 
ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಪಟ್ಟಿಯಲ್ಲಿನ ಸಂಖ್ಯೆ ಹಾಗೂ ಲಸಿಕೆ ಲಭ್ಯತೆಗೆ ಅನುಗುಣವಾಗಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಿಯಾ ಯೋಜನೆಯಂತೆ ಅರ್ಹ ಲಾನುಭವಿಗಳಿಗೆ ಲಸಿಕೀಕರಣದ ಸ್ಥಳ, ದಿನಾಂಕ ಮತ್ತು ಸಮಯದ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದ್ದಾರೆ.
 
ಶಾಲಾ ಮುಖ್ಯಸ್ಥರಿಂದ ಸಿಬ್ಬಂದಿಗಳು ಶೇ 100ರಷ್ಟು ಲಸಿಕೆ ಪಡೆದಿರುವ ಖಾತರಿ:
 
ಅರ್ಹ ಲಾನುಭವಿಗಳ ಸಂಖ್ಯೆ ಹಾಗೂ ಲಸಿಕೆ ಲಭ್ಯತೆ ಅನುಸಾರ ಶಾಲಾ ಆವರಣ ಅಥವಾ ಆಯ್ದ ಕಾಲೇಜು ಆವರಣದಲ್ಲಿ ಪ್ರಮಾಣಿತ ಕಾರ್ಯಸೂಚಿ (ಎಸ್‌ಓಪಿ) ಅನ್ವಯ ಲಸಿಕಾ ಅಭಿಯಾನ ಆಯೋಜಿಸಬೇಕು.
ಶಾಲೆಯ ಮುಖ್ಯಸ್ಥರು ತಮ್ಮ ಅಧೀನದ ಸಿಬ್ಬಂದಿ ಶೇ 100ರಷ್ಟು ಲಸಿಕೆ ಪಡೆದಿರುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
 
ದೈನಂದಿನ  ವರದಿ:
 
ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಜಿಲ್ಲೆಯ ಶಿಕ್ಷಕರು, ಬೋಧಕ-ಬೋಧಕೇತರ ಸಿಬ್ಬಂದಿಗಳ ಲಸಿಕೀಕರಣದ ದೈನಂದಿನ ಪ್ರಗತಿಯ ವರ್ಗೀಕೃತ ವರದಿಯನ್ನು ಶಾಲೆಗಳಿಂದ ಪಡೆದು ಲಸಿಕೀಕರಣ ಯಶಸ್ವಿಗೊಳಿಸಲು ಕ್ರಮ ತೆಗೆದುಕೊಂಡು ಎಲ್ಲಾ ಹಂತಗಳಲ್ಲಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಸಮನ್ವಯತೆಯೊಂದಿಗೆ ಕೇಂದ್ರ ಸರಕಾರದ ಕೋವಿಡ್-19  ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶನ ನೀಡಿದ್ದಾರೆ. 
 
ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಮನ್ವಯ ಸಭೆ ನಡೆಸಿ ಕ್ರಿಯಾ ಯೋಜನೆ ಅನುಷ್ಠಾನ, ಪ್ರಗತಿ ಪರಿಶೀಲನೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶಕಿ ಅರುಂಧತಿ ಸ್ಪಷ್ಟ ಸೂಚನೆ ರವಾನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜು.26ರವರೆಗೆ ಕರಾವಳಿ ಜಿಲ್ಲೆೆಗಳಲ್ಲಿ ವ್ಯಾಾಪಕ ಮಳೆ ಸಾಧ್ಯತೆ