ಪ್ರಧಾನಿ ನರೇಂದ್ರ ಮೋದಿ ಶನಿವಾರ ದೇಶವನ್ನು ಉದ್ದೇಶಿಸಿ ಮಾತನಾಡಿದರು. 15 ರಿಂದ 18 ವರ್ಷದ ಮಕ್ಕಳಿಗೆ ಜನವರಿಯಿಂದ ಲಸಿಕೆ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜನವರಿ 3ರ ಸೋಮವಾರದಿಂದ ಮಕ್ಕಳಿಗೆ ದೇಶಾದ್ಯಂತ ಲಸಿಕೆ ನೀಡಲಾಗುತ್ತದೆ.