ವಾಲ್ಮೀಕಿ ನಿಗಮ ಪ್ರಕರಣ: ಸಿಬಿಐ ತನಿಖೆ ಮಾಡಲ್ಲ, ಕಾರಣ ಹೀಗಿದೆ

Sampriya
ಬುಧವಾರ, 13 ನವೆಂಬರ್ 2024 (15:54 IST)
Photo Courtesy X
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ಸಿಬಿಐ ವಹಿಸಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಬುಧವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ತೀರ್ಪು ಪ್ರಕಟಿಸಿದೆ. ಈಗಾಗಲೇ ಈ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದೆ.

ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಕೆ ಮಾಡಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈಗಾಗಲೇ ಈ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 94.73 ಕೋಟಿ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಗಂಭೀರ ಆರೋಪ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ  ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಜಾಮೀನಿನ ಮೂಲಕ ಹೊರಬಂದಿರುವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ಬಿಡುಗಡೆಯಾಗಿತ್ತು. ಆದ್ದರಿಂದ ಯೂನಿಯನ್ ಬ್ಯಾಂಕ್ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments