Select Your Language

Notifications

webdunia
webdunia
webdunia
webdunia

ಮುಂಗಾರು ಅಧಿವೇಶನಕ್ಕೆ ಮುನ್ನವೇ ಸದನದ ಹೊರಗೆ ಬಿಜೆಪಿ ಪ್ರತಿಭಟನೆ

Karnataka BJP

Krishnaveni K

ಬೆಂಗಳೂರು , ಸೋಮವಾರ, 15 ಜುಲೈ 2024 (11:15 IST)
ಬೆಂಗಳೂರು: ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುನ್ನ ಇಂದು ಬೆಳ್ಳಂ ಬೆಳಿಗ್ಗೆಯೇ ಬಿಜೆಪಿ ವಾಲ್ಮೀಕಿ ಹಗರಣ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಶುರು ಮಾಡಿದೆ.

ಸದನದಲ್ಲಿ ಇಂದು ವಾಲ್ಮೀಕಿ ಹಗರಣ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದೆ. ಆದರೆ ಇದಕ್ಕೆ ಮೊದಲೇ ಇಂದು ಬಿಜೆಪಿ ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದೆ. ಇದಕ್ಕೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವ ವಹಿಸಿದ್ದರು.

ಸದನದಲ್ಲಿ ಈ ಬಾರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಡಾ ಮತ್ತು ವಾಲ್ಮೀಕಿ ನಿಗಮ ಹಗರಣವೆಂಬ ಎರಡು ಅಸ್ತ್ರಗಳಿವೆ. ಇದಕ್ಕೆ ಪ್ರತಿಯಾಗಿ ತಿರುಗೇಟು ನೀಡಲು ಸರ್ಕಾರ ಕೂಡಾ ಸಿದ್ಧತೆ ನಡೆಸಿದೆ. ಹೀಗಾಗಿ ಸದನದಲ್ಲಿ ಕಾವೇರಿದ ವಾತಾವರಣ ನಿರೀಕ್ಷಿಸಲಾಗಿತ್ತು.

ಇಂದು ಬಿವೈ ವಿಜಯೇಂದ್ರ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಜರಿದ್ದರು. ಸದನದಲ್ಲೂ ಈ ಪ್ರತಿಭಟನೆ ಮುಂದುವರಿಯುವ ಸಾಧ್ಯತೆಗಳಿವೆ.
 


Share this Story:

Follow Webdunia kannada

ಮುಂದಿನ ಸುದ್ದಿ

ವಾಲ್ಮೀಕಿ ಹಗರಣದ ಬಗ್ಗೆ ಬಿಲ್ ಕುಲ್ ಬಾಯಿ ಬಿಡ್ತಿಲ್ಲ ನಾಗೇಂದ್ರ: ಇಡಿ ಅಧಿಕಾರಿಗಳು ಸುಸ್ತು