Select Your Language

Notifications

webdunia
webdunia
webdunia
webdunia

ವಾಲ್ಮೀಕಿ ಹಗರಣ: ಬಿ ನಾಗೇಂದ್ರನೇ ಮಾಸ್ಟರ್‌ಮೈಂಡ್‌, ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ವಾಲ್ಮೀಕಿ ನಿಗಮ ಹಗರಣ, ಬಿ.ನಾಗೇಂದ್ರ, ಮುಖ್ಯಮಂತ್ರಿ ಸಿದ್ದರಾಮಯಯ್ಯ,

Sampriya

ಬೆಂಗಳೂರು , ಬುಧವಾರ, 9 ಅಕ್ಟೋಬರ್ 2024 (19:06 IST)
Photo Courtesy X
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187ಕೋಟಿ ರೂ ಹಗರಣದ ಚಾರ್ಜ್‌ಶೀಟ್‌ನಲ್ಲಿ  ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇಂದು ಇಡಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ 24 ಮಂದಿ ಆರೋಪಿಗಳ ವಿರುದ್ಧದ ದೋಷರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ.

ಈ ಪ್ರಕರಣದ ಮಾಸ್ಟರ್‌ ಮೈಂಡ್ ಬಿ ನಾಗೇಂದ್ರ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಅತಿಯಾದ ಆತ್ಮವಿಶ್ವಾಸ ಹರಿಯಾಣ ವಿಧಾನಸಭೆ ಸೋಲಿಗೆ ಕಾರಣ: ಡಿಕೆ ಸುರೇಶ್