Publish Date: Fri, 05 Aug 2022 (15:23 IST)
Updated Date: Fri, 05 Aug 2022 (15:26 IST)
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿಲಿಕಾನ್ ಸಿಟಿ ಜನರು ವರಮಹಾಲಕ್ಷ್ಮೀ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಹಿನ್ನಲೆ ಕೆ.ಆರ್ ಮಾರ್ಕೆಟ್ನಲ್ಲಿ ಹಬ್ಬದ ವಸ್ತುಗಳ ಖರೀದಿಯಲ್ಲಿ ಜನ ತೊಡಗಿದ್ದು,
ಹೂ, ಹಣ್ಣು, ತರಕಾರಿಯನ್ನು ಜನರು ಖರೀದಿಸುತ್ತಿದ್ದಾರೆ. ಹಬ್ಬದ ಸಂಭ್ರಮದಿಂದಾಗಿ ಮಾರ್ಕೆಟ್ನಲ್ಲಿ ಜನ ಸಾಗರ ಹಿನ್ನೆಲೆ ಕೆ.ಆರ್ ಮಾರ್ಕೆಟ್ನ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳೆದ ಒಂದುವಾರದಿಂದ ಸಿಲಿಕಾನ್ ಸಿಟಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನಲೆ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.