Select Your Language

Notifications

webdunia
webdunia
webdunia
webdunia

ರಾಜಧಾನಿಯಲ್ಲಿ ವರುಣನ ಸಿಂಚನ

ರಾಜಧಾನಿಯಲ್ಲಿ ವರುಣನ ಸಿಂಚನ
bangalore , ಗುರುವಾರ, 5 ಮೇ 2022 (20:37 IST)
ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದೆ. ಸಂಜೆಯಾಗುತ್ತಿದ್ದಂತೆ ಸುರಿಯಲು ಆರಂಭಿಸಿದ ಮಳೆ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿತು. ಮೆಜೆಸ್ಟಿಕ್, ಕಾರ್ಪೊರೇಷನ್, ಕೆ.ಆರ್.ಮಾರುಕಟ್ಟೆ, ಚಾಮರಾಜಪೇಟೆ, ಬಸವನಗುಡಿ, ಜಯನಗರ, ಜೆ.ಪಿ ನಗರ, ಕುಮಾರಸ್ವಾಮಿ ಲೇಔಟ್, ಉತ್ತರಹಳ್ಳಿ, ಹೊಸಕೆರೆಹಳ್ಳಿ, ಪದ್ಮನಾಭನಗರ ,   ಸಿದ್ದಾಪುರ, ವಿಲ್ಸನ್ ಗಾರ್ಡನ್ ಸೇರಿದಂತೆ ನಗರ ವಿವಿಧ ಪ್ರದೇಶಗಳಲ್ಲಿ ಮಳೆ ಸುರಿಯಿತು.ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಜನರು ಮಳೆಯಲ್ಲಿ ಸಿಲುಕಿ ಪರದಾಡಿದರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲಿಯೇ ನೆನೆದು ಸಾಗುತ್ತಿದ್ದ ದೃಶ್ಯ ಕಂಡು ಬಂತು. ಶುಕ್ರವಾರ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನರ್ಸ್‌ ಸರ್ಟಿಫಿಕೇಟ್‌ ಕೊಡಿಸುವುದರಲ್ಲಿ ಅಶ್ವಥ್‌ ನಾರಾಯಣ್‌ ಎತ್ತಿದ ಕೈ: ಎಚ್.ಡಿ. ಕುಮಾರಸ್ವಾಮಿ