Select Your Language

Notifications

webdunia
webdunia
webdunia
webdunia

ರಾಜ್ಯದಾದ್ಯಂತ ವರುಣನ ಅಬ್ಬರ: ರಾಜಧಾನಿಯಲ್ಲಿ ಸಾಧಾರಣ ಮಳೆ ಸಾಧ್ಯತೆ

ರಾಜ್ಯದಾದ್ಯಂತ ವರುಣನ ಅಬ್ಬರ: ರಾಜಧಾನಿಯಲ್ಲಿ ಸಾಧಾರಣ ಮಳೆ ಸಾಧ್ಯತೆ

Sampriya

ಬೆಂಗಳೂರು , ಭಾನುವಾರ, 4 ಆಗಸ್ಟ್ 2024 (10:58 IST)
ಬೆಂಗಳೂರು: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಶನಿವಾರ ಸಿದ್ದಾಪುರ, ಲೋಂಡಾ, ಕಾರ್ಕಳ, ಕಾರವಾರ, ಗೇರುಸೊಪ್ಪ, ಹೊನ್ನಾವರ, ಕೊಲ್ಲೂರು, ಶೃಂಗೇರಿ, ಗೋಕರ್ಣ, ಮುಲ್ಕಿ, ಕದ್ರಾ, ಲಿಂಗನಮಕ್ಕಿ, ಕಮ್ಮರಡಿ, ಭಾಗಮಂಡಲ, ಜಯಪುರದಲ್ಲಿ ಭಾರಿ ಮಳೆಯಾಗಿದೆ.  

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯ ಮಹಾ ಮೋಸಕ್ಕೆ ಕುಮಾರಸ್ವಾಮಿ ಹರಕೆಯ ಕುರಿ: ದಿನೇಶ್ ಗುಂಡೂರಾವ್ ವ್ಯಂಗ್ಯ