Publish Date: Sun, 01 May 2022 (18:18 IST)
Updated Date: Sun, 01 May 2022 (18:19 IST)
ರಾಜ್ಯ ರಾಜ್ಯಧಾನಿಯಲ್ಲಿ ಇಂದು ಹಲವೆಡೆ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆಬೆಂಗಳೂರು ನಗರದ ಹಲವೆಡೆ ಧಾರಾಕಾರವಾಗಿ ವರುಣ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿವಾಳ, ಕೋರಮಂಗಲ, ಸರ್ಜಾಪುರ ರಸ್ತೆಯಲ್ಲಿ ಆಲಿಕಲ್ಲು ಮಳೆಯಿಂದ ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತ್ತಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.