ರಾಜ್ಯದಲ್ಲಿ ಜುಲೈ 27ರವರೆಗೆ ವರುಣನ ಅಬ್ಬರ : ಹಲವು ಜಿಲ್ಲೆಗಳಲ್ಲಿ ಹೈಅಲರ್ಟ್‌

Webdunia
ಶುಕ್ರವಾರ, 23 ಜುಲೈ 2021 (21:13 IST)
ಬೆಂಗಳೂರು : ಬಂಗಾಳ ಉಪಸಾಗರದ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಪೂರ್ವ ಅರಬ್ಬೀ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಇದರ ಪ್ರಭಾವದಿಂದ ಜುಲೈ 23 ರಿಂದ 27ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
 
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನಾಳೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಜುಲೈ 25, 26ರಂದು ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ರೆಡ್, ನಾಳೆ ಆರೆಂಜ್, ಜುಲೈ 25ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಧಾರವಾಡ, ಹಾವೇರಿ, ಗದಗ್, ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳಿಗೆ ಇಂದು ಆರೆಂಜ್, ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜುಲೈ 25ರಂದು ಮಳೆಯ ವಿಂಗಡಣೆ ಹಾಗೂ ತೀವ್ರತೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಮಾ
ನ್ಸೂನ್ ಚುರುಕಾಗಿದೆ. ಮುಖ್ಯವಾಗಿ ಬೆಳಗಾವಿ ಜಿಲ್ಲೆಯ ಲೊಂಡಾದಲ್ಲಿ 38 ಸೆ. ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 34 ಸೆ.ಮೀ, ಶಿವಮೊಗ್ಗ ಜಿಲ್ಲೆಯ ತಾಳುಗುಪ್ಪದಲ್ಲಿ 27 ಸೆ. ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments