Webdunia - Bharat's app for daily news and videos

Install App

ಎಂಇಎಸ್‌, ಶಿವಸೇನಾ ಪುಂಡಾಟ ವಿರುದ್ಧ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್‌ ಕರೆ

Sampriya
ಸೋಮವಾರ, 10 ಮಾರ್ಚ್ 2025 (14:51 IST)
Photo Courtesy X
ಬೆಂಗಳೂರು: ಬೆಳಗಾವಿಯ ರಕ್ಷಣೆ, ಎಂಇಎಸ್ ನಿಷೇಧ, ಮಹದಾಯಿ ಯೋಜನೆ ಅನುಷ್ಠಾನ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತಾಯಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಕರೆ ಕೊಟ್ಟಿದ್ದೇವೆ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ ಹೇಳಿದ್ದಾರೆ.

ಮಾರ್ಚ್‌ 22ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಮಾಡಲಾಗುವುದು. ಅಂದು ಬೆಳಗಾವಿಗೆ ಬರುವ ಕುರಿತು ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಶಿವಸೇನಾ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸಬೇಕು ಎಂದು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟದವರು ಬೆಳಗಾವಿ ನಗರದಲ್ಲಿ ಸೋಮವಾರ ಪ್ರತಿಭಟನೆ ಆರಂಭಲಾಗಿದೆ. ಈ ಪ್ರತಿಭಟನೆಯ ನೇತೃತ್ವದನ್ನು ವಾಟಾಳ್ ನಾಗರಾಜ ವಹಿಸಿದ್ದಾರೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಳ್ಳುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಬೆಳಗಾವಿಯಲ್ಲಿನ ಮರಾಠಿ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ವಾಟಾಳ್‌ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈವರೆಗೆ ಕ್ರಮ ಕೈಗೊಳ್ಳಲಿಲ್ಲ. ಶೀಘ್ರವೇ ಎಂಇಎಸ್ ನಿಷೇಧ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments