Publish Date: Sun, 19 Dec 2021 (15:12 IST)
Updated Date: Sun, 19 Dec 2021 (16:46 IST)
ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಪುಂಡಾಟ ನಡೆಸಿದ ಘಟನೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಬೆಳಗಾವಿ ಚಲೋಗೆ ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿ MES ಪುಂಡಾಟ ವಿಚಾರವಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿದ್ದು ಸಂಗೊಳ್ಳಿ ರಾಯಣ್ಣ ದೇಶಕ್ಕೆ ತಮ್ಮ ಪ್ರಾಣವನ್ನು ಅರ್ಪಣೆ ಮಾಡಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಯುಂಟು ಮಾಡುವ ಮೂಲಕ ಎಂಇಎಸ್, ಶಿವಸೇನೆ ಗುಂಡಾಗಿರಿ ಮಾಡಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಎಂಇಎಸ್ ಅನ್ನು ನಿಷೇಧ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದು, ಈ ಬಗ್ಗೆ ಯಾರೂ ಚಕಾರ ಎತ್ತಬಾರದು. ಇದು ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆ. ಕನ್ನಡ ಪರ ಸಂಘಟನೆಗಳ ಮುಖಂಡರು ತೀರ್ಮಾನ ತೆಗೆದುಕೊಳ್ಳಬೇಕು. ಹೋರಾಟ ತೀವ್ರಗೊಳಿಸಲು ನಿರ್ಧಾರ ಮಾಡಿದ್ದು, ನಾಳೆ ಸಂಜೆ ಒಳಗೆ ಎಂಇಎಎಸ್ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.