Publish Date: Sat, 13 Mar 2021 (12:36 IST)
Updated Date: Sat, 13 Mar 2021 (12:38 IST)
ಬೆಂಗಳೂರು : ತಮಿಳುನಾಡಿನಲ್ಲಿ ನದಿ ಜೋಡಣೆ ಯೋಜನೆ ವಿರೋಧಿಸಿ ಪ್ರತಿಭಟನೆ ಹಿನ್ನಲೆ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಸಿಡಿ ಬಿಟ್ಟರೆ ಯಾವ ಸಮಸ್ಯೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಮಹದಾಯಿ ಯೋಜನೆ ಆರಂಭದ ಬಗ್ಗೆ ಸರ್ಕಾರ ಗಮನಿಸುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ. ಮುಂದಿನ ವಾರ ಕನ್ನಡ ಪರ ಸಂಘಟನೆಗಳ ಸಭೆ ಕರೆಯುತ್ತೇವೆ. ಕರ್ನಾಟಕ ಬಂದ್ ಗೆ ದಿನಾಂಕ ನಿಗದಿಪಡಿಸಿ ಕರೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.