ಮಾಡೋದೆಲ್ಲಾ ಮಾಡಿ ಕೊನೆಗೆ ನನಗೇನು ಗೊತ್ತೇ ಇಲ್ಲ ಅಂದ್ರು ವೀರಪ್ಪ ಮೊಯಿಲಿ!

Webdunia
ಶುಕ್ರವಾರ, 16 ಮಾರ್ಚ್ 2018 (09:31 IST)
ಬೆಂಗಳೂರು: ವೀರಪ್ಪ ಮೊಯಿಲಿ ಮಾಡಿದ ಟ್ವೀಟ್ ಒಂದು ಇದೀಗ ಬಹು ಚರ್ಚೆಯ ವಿಷಯವಾಗಿದೆ. ಸಾರ್ವಜನಿಕವಾಗಿ ಪಕ್ಷಕ್ಕೆ ಮುಜುಗರ ತರುವಂತಹ ಟ್ವೀಟ್ ಮಾಡಿ ಇದೀಗ ತನಗೇನೂ ಗೊತ್ತೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮೊಯಿಲಿ ಬಾಯಿ ಒರೆಸಿಕೊಂಡಿದ್ದಾರೆ.

ಕಾಂಗ್ರೆಸ್ ನಲ್ಲಿ ಹಣದ ಪ್ರಭಾವ ಹೆಚ್ಚಾಗುತ್ತಿದೆ. ರಸ್ತೆ  ಗುತ್ತಿಗೆದಾರರೊಂದಿಗೆ ಲೋಕೋಪಯೋಗಿ ಸಚಿವರ ನಂಟು ಹೆಚ್ಚಿದೆ ಎಂದೆಲ್ಲಾ ಟ್ವೀಟ್ ಮಾಡಿ ತಮ್ಮ ಪಕ್ಷದ ಮರ್ಯಾದೆಯನ್ನು ತಾವೇ ಹರಾಜು ಹಾಕಿದ್ದ ವೀರಪ್ಪ ಮೊಯಿಲಿ ಇದೀಗ ವಿವಾದವಾಗುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.

ವೀರಪ್ಪ ಮೊಯಿಲಿಯವರ ಅಧಿಕೃತ ಖಾತೆಯಿಂದ ಟ್ವೀಟ್ ಆದ ಟ್ವೀಟ್ ಇದಾಗಿತ್ತು. ಹಾಗಿದ್ದರೂ ಆ ಟ್ವೀಟ್ ಗೂ ನನಗೂ ಸಂಬಂಧವಿಲ್ಲ. ಪಕ್ಷದ ವಿಚಾರ ಮಾತನಾಡಲು ನಾನು ಮಾಧ್ಯಮದ ಮುಂದೆ ಹೋಗಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.

ಅದೇನೇ ಇರಲಿ, ತಮ್ಮ ಪುತ್ರನಿಗೆ ಟಿಕೆಟ್ ನಿರಾಕರಿಸಿ ಲೋಕೋಪಯೋಗಿ ಸಚಿವ ಮಹದೇವಪ್ಪ ಪುತ್ರನಿಗೆ ಟಿಕೆಟ್ ನೀಡಲು ನಿರ್ಧರಿಸಿರುವುದಕ್ಕೆ ಅಸಮಾಧಾನಗೊಂಡ ಮೊಯಿಲಿ ಇಂತಹದ್ದೊಂದು ಟ್ವೀಟ್ ಮಾಡಿದ್ದರು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments