Publish Date: Fri, 16 Jun 2023 (17:37 IST)
Updated Date: Fri, 16 Jun 2023 (18:42 IST)
ಧಾರವಾಡದಲ್ಲಿ ಹುಬ್ಬಳ್ಳಿ-ವೀರಶೈವ ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಆಗ್ರಹಿಸಿದ್ದಾರೆ. ಮೂರು ಸಾವಿರ ಮಠದಲ್ಲಿ ವಿವಿಧ ಮಠಾಧೀಶರ ಸಭೆ ನಡೆಸಿದ್ಧಾರೆ. ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆ ನೇತೃತ್ವದಲ್ಲಿ ಸಭೆ ನಡೆದಿದೆ. ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನಿಧ್ಯತೆ ಇದ್ದು, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಸ್ವಾಮೀಜಿ, ಉಜನಿ ಪೀಠಗಳ ಜಗದ್ಗುರುಗಳು ಭಾಗಿ ಅನ್ನದಾನೇಶ್ವರ ಸ್ವಾಮೀಜಿ, ಶಿರಹಟ್ಟಿ ಫಕೀರೇಶ್ವರ ಮಠದ ಫಕೀರ ಸಿದ್ಧರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಭಾಗಿಯಾಗಿದ್ರು. ವೀರಶೈವ, ಲಿಂಗಾಯತ ಒಳಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸಲು ಹಕ್ಕೊತ್ತಾಯ ಮಾಡಿದ್ರು.