ಬಾಲಕಿ ಮೇಲೆ ವಾಹನ ಹರಿದು ಸಾವು

Webdunia
ಮಂಗಳವಾರ, 29 ಮಾರ್ಚ್ 2022 (16:22 IST)
ರಸ್ತೆ ಬದಿಯಲ್ಲಿ ಮಲಗಿದ್ದ ಏಳು ವರ್ಷದ ಬಾಲಕಿ ಮೇಲೆ ಬೊಲೆರೋ ವಾಹನ ಹರಿದು ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮುಂಜಾನೆ ನಾಲ್ಕು ಗಂಟೆಗೆ ಈ ದುರ್ಘಟನೆ ನಡೆದಿದ್ದು, ತಮಿಳುನಾಡು ಮೂಲದ ಶಿವನ್ಯ ಮೃತ ದುರ್ದೈವಿಯಾಗಿದ್ದಾಳೆ. ಮೃತ ಮಗು, ಆಕೆಯ ತಾಯಿ ಇಬ್ಬರೂ ಅಲಂಕಾರಿಕ ವಸ್ತುಗಳನ್ನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮೂರ್ನಾಲ್ಕು ದಿನಗಳ ಹಿಂದೆ ಹುಸ್ಕೂರು ಜಾತ್ರೆಗೆ ಬಂದಿದ್ದರು. ಬಳಿಕ ಊರಿಗೆ ವಾಪಸ್ ಹೋಗಲು ಬಸ್ ಗಾಗಿ  ಸಿಟಿ ಮಾರ್ಕೆಟ್ ಗೆ ಬಂದಿದ್ದರು.  ನಿನ್ನೆ ರಾತ್ರಿ ಬಸ್ ಸಿಗದೇ ತೆಂಗಿನ ಕಾಯಿ ಮಂಡಿ ಬಳಿಯೇ ಮಕ್ಕಳ ಸಮೇತ ಮಹಿಳೆಯರು ಮಲಗಿದ್ದರು. ಈ ವೇಳೆ ವಾಹನದಲ್ಲಿ ಹೂ ಹಾಕಿಕೊಂಡು ಬಂದಿದ್ದ ಚಾಲಕ ಅನ್ ಲೋಡ್ ಮಾಡಿ ಹೊರಡಲು ಮುಂದಾಗಿದ್ದು, ರಸ್ತೆ ಬದಿಯಲ್ಲಿ ಮಲಗಿದ್ದವರನ್ನು ಗಮನಿಸದೆ ರಿವರ್ಸ್ ತೆಗೆಯುವಾಗ ಬಾಲಕಿ ಮೇಲೆ ಹತ್ತಿಸಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments