ವಾಹನಗಳ ಬೀಗ ಮುರಿದು ಕಳ್ಳತನ

Webdunia
ಗುರುವಾರ, 11 ನವೆಂಬರ್ 2021 (20:54 IST)
ಬೆಂಗಳೂರು: ಹಗಲು ಮತ್ತು ರಾತ್ರಿಯ ವೇಳೆ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕರ ವಾಹನಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳಾದ ನವೀದ್ ಪಾಷಾ, ಸಾಯೆದ್ ರೋಷನ್ ಎನ್ನುವವರನ್ನು ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. 
 
ಬಂಧಿತ ಆರೋಪಿಗಳಿಂದ ಸುಮಾರು 7 ಲಕ್ಷ ರೂ ಮೌಲ್ಯದ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ, ಆರೋಪಿಗಳ ವಿರುದ್ಧ ನಗರದ 13 ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿತ್ತು ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ  ತಿಳಿಸಿದ್ದಾರೆ. 
 
ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು, ಸುಬ್ರಮಣ್ಯಪುರ ಪೊಲೀಸ್ ಠಾಣೆ, ಪುಟ್ಟೇನಹಳ್ಳಿ, ಕೋಣನಕುಂಟೆ, ಜೆ.ಪಿ ನಗರ, ಬನಶಂಕರಿ, ಹನುಮಂತನಗರ, ಸಿ.ಕೆ ಅಚ್ಚುಕಟ್ಟು, ಹಾಗು ಆರ್.ಆರ್ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ಭೇದಿಸಿದಂತಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
 
ಈ ಪ್ರಕರಣಗಳನ್ನು ಭೇದಿಸಿದ ಸುಬ್ರಮಣ್ಯಪುರ ಪೊಲೀಸ್ ಉಪ ವಿಭಾಗದ ಉಪ ಪೊಲೀಸ್ ಆಯುಕ್ತ ಟಿ.ಎಂ ಶಿವಕುಮಾರ್ ನೇತೃತ್ವದಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ. ಶಿವಕುಮಾರ್, ಸಬ್ ಇನ್ಸ್ಪೆಕ್ಟರ್ ಹೆಚ್.ಎಂ ನಾಗೇಶ್, ಹೆಚ್ ಎಂ ಶ್ರೀಕಂಠಯ್ಯ  ಹಾಗು ಸಿಬ್ಬಂದ್ದಿಗಳನ್ನು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಶ್ಲಾಘಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಗೋಲ್ಡ್ ಮದುವೆ: ಮಗಳಿಗೆ ಚಿನ್ನ ಬೇಡ ಸೈಟ್ ಕೊಡಿಸೋಣ ಅಂತಿದ್ದಾರೆ ಪೋಷಕರು

Karnataka Weather: ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ನೋಡಿ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಮುಂದಿನ ಸುದ್ದಿ
Show comments