ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಬಡ್ಡಿಗೇರಿ ಬಳಿ ಟಾಟಾ ಎಸ್ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗೌಳಿವಾಡಾದಿಂದ ಕುಸೂರು ಗ್ರಾಮದ ಕಡೆ ವಾಹನ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮಳ್ಳು ಗಾವಡೆ ಮೃತಪಟ್ಟ ದುರ್ವೈವಿ. ಟಾಟಾ ಏಸ್ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾಮಿ೯ಕರಿದ್ದರು. ಈ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಯಾಗಿದೆ. ಘಟನೆಯಲ್ಲಿ ಹತ್ತಕ್ಕೂ ಅಧಿಕ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮುಂಡಗೋಡು ಮತ್ತು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.