ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂಗೀತ ಸಾಧಕರಿಗೆ ಕೊಡಲ್ಪಡುವ 2025ನೇ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ವೈಕೆ ಮುದ್ದುಕೃಷ್ಣ ನೇತೃತ್ವದ ಸಮಿತಿ ಈ ಪ್ರಶಸ್ತಿಗೆ ವೆಂಕಟೇಶ್ ಅವರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿಯು₹ 5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಇದೇ 22ರಂದು ನಡೆಯುವ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಅದ್ಭುತ ಗಾಯನದ ಮೂಲಕ ವೆಂಕಟೇಶ್ ಕುಮಾರ್ ಅವರು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.