1727 ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಬುಧವಾರ ಅಸ್ತು ಎಂದಿದೆ.
ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್‌ಸಿಟಿಇ) ನಿಯಮಾವಳಿಗಳ ಅಡಿಯಲ್ಲಿ ಈ ಭರ್ತಿ ನಡೆಯಲಿದೆ.
ಈ ಹಿಂದೆ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದಾಗ ಎನ್‌ಸಿಟಿಇ ನಿಯಮ ಪಾಲಿಸಿಲ್ಲ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿತ್ತು. ಹೀಗಾಗಿ ಎನ್‌ಸಿಟಿಇ ನಿಯಮಗಳ ಪ್ರಕಾರ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಪ್ರೌಢಶಾಲಾ ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳ ನಿಯಮಗಳಿಗೆ ತಿದ್ದುಪಡಿ ತರಲು ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಅವರು ಹೇಳಿದ್ದಾರೆ.